ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಅದೇ ರೀತಿ ರೈತರಿಗೆ ಬೆಂಬಲ ಬೆಲೆ ಹೆಚ್ಚಾಗಿ ಕೊಡ್ತೀರಾ..?- ಕೇಂದ್ರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ.

Promotion

ಚಿತ್ರದುರ್ಗ,ಜೂನ್,12,2021(www.justkannada.in): ದೇಶದಲ್ಲಿ ತೈಲಬೆಲೆ ಏರಿಕೆಯಾಗಿರುವ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾದಂತೆ ಅದೇ ರೀತಿ ರೈತರಿಗೆ ಬೆಂಬಲ ಬೆಲೆ ಹೆಚ್ಚಾಗಿ ಕೊಡ್ತೀರಾ..? ಎಂದು ಪ್ರಶ್ನಿಸಿದ್ದಾರೆ.jk

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿ.ಕೆಶಿವಕುಮಾರ್, ಸರ್ಕಾರದ ಬೊಕ್ಕಸ ತುಂಬಿದರೆ ಸಾಕೇ..? ಬಡವರು, ಜನಸಾಮಾನ್ಯರು ಜೀವನ ನಡೆಸುವುದು ಹೇಗೆ? ಅವರ ಪರಿಸ್ಥಿತಿ ಏನಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಬಾರಿ ಹೆಚ್ಚಳ ಮಾಡಿದ್ದೀರಲ್ಲಾ.., ರೈತರ ಬೆಂಬಲ ಬೆಲೆ ಎಷ್ಟು ಬಾರಿ ಹೆಚ್ಚಿಸಿದ್ದೀರಿ? ರೈತನ ಎಲ್ಲ ಬೆಳೆಯ ಬೆಲೆಯನ್ನು ಎಷ್ಟು ಬಾರಿ ಹೆಚ್ಚಿಸಿದ್ದೀರಿ? ದಿನಗೂಲಿ, ಖಾಸಗಿ ಕಾರ್ಮಿಕರು, ನೌಕರರು, ನರೇಗಾ ಕಾರ್ಮಿಕರ ಸಂಬಳ ಹೆಚ್ಚಳ ಮಾಡುತ್ತೀರಾ? ಮನ್ರೇಗಾ ಯೋಜನೆಯ ಕೂಲಿ ಹಣವನ್ನೇ ಹೆಚ್ಚಳ ಮಾಡಿಲ್ಲ. ನಿಮ್ಮ ಜೇಬು ಮಾತ್ರ ತುಂಬಬೇಕಾ? ಬಡವರು ಏನು ಮಾಡಬೇಕು? ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ನಾವು ಜನರು ಸೇರಿ ಈ ಸರ್ಕಾರವನ್ನ ಕಿತ್ತೊಗೆಯಬೇಕು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: Petrol- diesel- price hike-farmers –kpcc-president-DK Shivakumar