ಪೆಟ್ರೋಲ್, ಡಿಸೇಲ್ ದರ ಏರಿಕೆ ಹಿನ್ನೆಲೆ: ಕೇಂದ್ರ ಸರ್ಕಾರದ ವಿರುದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ…  

Promotion

ಮೈಸೂರು,ಮಾ,17,2020(www.justkannada.in): ಪೆಟ್ರೋಲ್ ಡಿಸೇಲ್ ದರ ಏರಿಕೆ ಮಾಡಿರುವ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

ಆಯಿಲ್ ಲೋಟಿ ಮಾಡುವ ಸರ್ಕಾರ ಕೇಂದ್ರದ ಮೋದಿ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಪೆಟ್ರೋಲ್ ಡಿಸೇಲ್ ದರ ಏರಿಕೆ ವಿರೋಧಿಸಿ ಮೈಸೂರಿನ ಇಂದಿರಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ನಿಂದ ಸುದ್ದಿಗೋಷ್ಠಿ ನಡೆಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್,  ಕೇಂದ್ರ ಸರ್ಕಾರ ಪ್ರತಿ ಲೀಟರ್  ಡಿಸೇಲ್ ಮತ್ತು ಪೆಟ್ರೋಲ್ ಗೆ 3 ರೂ ಮತ್ತು ರಾಜ್ಯ ಸರ್ಕಾರ 2 ರೂ ಹೆಚ್ಚಿಸಿದೆ. ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆ 33 ಡಾಲರ್ ಗೆ ಕುಸಿದಿದ್ದರೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿದಿಲ್ಲ. ಈ ಧೋರಣೆಯಿಂದ ದೇಶದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಪೆಟ್ರೋಲ್ ಡಿಸೇಲ್ ದರವನ್ನ ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುತ್ತಿದ್ದೇವೆ. ಜನ ವಿರೋಧಿ ನೀತಿಯಿಂದ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು.

Key words: petrol- diesel rate- hike-mysore-KPCC- spokesperson -M Laxman –  central government.