ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ.

Promotion

ಬೆಂಗಳೂರು,ಆಗಸ್ಟ್,17,2021(www.justkannada.in):  ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ  ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ  ಎಂದು ಸ್ಪಷ್ಟನೆ ನೀಡಿದರು.

ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. ನಾಳೆ ಮೂರು ಇಲಾಖೆಗಳ ಸಭೆಯನ್ನ ಮಾಡ್ತೇನೆ. ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸುತ್ತೇನೆ. ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆ ಮಾಡಬೇಕು. ಸ್ವಾತಂತ್ರ್ಯ ಘೋಷಣೆ ಮಾಡಿದ ಯೋಜನೆಗಳು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Petrol price -Tamil Nadu – Rs.3-reduction-CM -Basavaraja Bommai