ಈ ರಾಜ್ಯದಲ್ಲಿ ಪೆಟ್ರೋಲ್ ದರ.25 ರೂ. ಕಡಿತ

ರಾಂಚಿ,ಡಿಸೆಂಬರ್,29,2021(www.justkannada.in): ಸಹಾಯಧನ ನೀಡುವ ಮೂಲಕ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ ಗೆ  25 ರೂ. ಕಡಿತ ಮಾಡಲು  ತೀರ್ಮಾನಿಸಿದ್ದೇವೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್  ಘೋಷಣೆ ಮಾಡಿದ್ದಾರೆ.

ಈ  ಕುರಿತು ಟ್ವಿಟ್ ಮಾಡಿರುವ ಜಾರ್ಖಂಡ್ ಮುಖ್ಯಮಂತ್ರಿಗಳ ಕಾರ್ಯಾಲಯ, ‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು ಬಡವರು, ಮಧ್ಯಮ ವರ್ಗದ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್‌ ದರದಲ್ಲಿ ಶೇ.25ರಷ್ಟು ಸಹಾಯಧನ ನೀಡಲು ನಿರ್ಧರಿಸಿದೆ. 2022ರ ಜನವರಿ 26ರಿಂದ ಇದರ ಪ್ರಯೋಜನ ದೊರೆಯಲಿದೆ’ ಎಂದು ಉಲ್ಲೇಖಿಸಿದ್ದಾರೆ.

ದರ ಕಡಿತವು 2022ರ ಜನವರಿ 26ರಿಂದ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Key words: petrol rate – Jharkhand- state – Rs.25. Reduction.