ಫೋನ್ ಕದ್ಧಾಲಿಕೆ ಆರೋಪ: ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ಏನು ಗೊತ್ತೆ…?

Promotion

ಬೆಂಗಳೂರು,ಆ,15,2019(www.justkannada.in):  ಹಿಂದಿನ ಸರ್ಕಾರದ ಅವಧಿಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ರಾಜಕಾರಣಿಗಳು, ಅಧಿಕಾರಿಗಳ ಫೋನ್ ಕದ್ಧಾಲಿಕೆ ಮಾಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ.

ಫೋನ್ ಕದ್ದಾಲಿಕೆಯಲ್ಲಿ ಯಾರೇ ಭಾಗಿಯಾಗಿದ್ದರೂ ಸರಿ ಅವರಿಗೆ ಶಿಕ್ಷೆಯಾಗಲಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಫೋನ್ ಕದ್ಧಾಲಿಕೆ ಬಗ್ಗೆ ನನಗೆ ಗೊತ್ತಿಲ್ಲ; ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ಮಾಡಿಸಲಿ. ಫೋನ್ ಕದ್ಧಾಲಿಕೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆಯಾಗಲಿ ಎಂದು ಹೇಳಿದರು.

ನಿನ್ನೆ ಮೈಸೂರಿನಲ್ಲಿ ಮಾತನಾಡಿದ್ದ ಅನರ್ಹ ಶಾಸಕ ಹೆಚ್,ವಿಶ್ವನಾಥ್, ಹೆಚ್.ಡಿ ಕುಮಾರಸ್ವಾಮಿ ನನ್ನ ಫೋನ್ ಕದ್ಧಾಲಿಕೆ ಮಾಡಿಸಿದ್ದಾರೆ. ಫೋನ್ ಟ್ಯಾಪ್ ಮಾಡಿ  ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಬ್ಲ್ಯಾಕ್ ಮೇಲ್ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದರು. ನಂತರ ಬಿಜೆಪಿ ನಾಯಕರು ಸಹ ತಮ್ಮ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿದ್ದರು.

Key words: phone tapping-siddaramaiah- reaction- bangalore