ರೈಡರ್ ಸಿನಿಮಾಗೆ ಪೈರಸಿ ಕಾಟ: ನಿಖಿಲ್ ಆಕ್ರೋಶ

ಬೆಂಗಳೂರು, ಡಿಸೆಂಬರ್ 27, 2021 (www.justkannada.in): ನಿಖಿಲ್ ನಟನೆಯ ರೈಡರ್ ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ.

ಸಿನಿಮಾ ಉತ್ತಮ ರೆಸ್ಪಾನ್ಸ್ ಹಿನ್ನೆಲೆ ನಿಖಿಲ್ ವಿಜಯ ಯಾತ್ರೆ ಮಾಡುತ್ತಿದ್ದಾರೆ. ಈ ನಡುವೆ ಚಿತ್ರಕ್ಕೆ ಪೈರಸಿ ಕಾಡುತ್ತಿದೆ.

ಡಿಸೆಂಬರ್ 24ಕ್ಕೆ ರಿಲೀಸ್ ಆಗಿದ್ದ ರೈಡರ್ ಸಿನಿಮಾಗೆ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ಳುತ್ತಿತ್ತು. ಸಿನಿಮಾ ರಿಲೀಸ್ ಆದ ಎರಡನೇ ದಿನಕ್ಕೆ ಕಿಡಿಗೇಡಿಗಳಿಂದ ರೈಡರ್ ಸಿನಿಮಾ ಪೈರಸಿಯಾಗಿದೆ.

ತಮಿಳ್ ರಾಕರ್ಸ್ ರಿಂದ ರೈಡರ್ಗೆ ಪೈರ ಸಿ ಕಾಟ ಶುರುವಾಗಿದೆ. ಕಿಡಿಗೇಡಿಗಳ ವಿರುದ್ಧ ರೈಡರ್ ಚಿತ್ರತಂಡ, ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದೆ.