ಏಪ್ರಿಲ್ 5 ರಂದು ಮೋದಿ ಕರ್ನಾಟಕಕ್ಕೆ ಬರುವ ನಿರೀಕ್ಷೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾರ್ಚ್ 26, 2022 (www.justkannada.in): ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಧಾನಮಂತ್ರಿಗಳ ರಾಜ್ಯಕ್ಕೆ ಭೇಟಿ ನೀಡುವುದು ಅಧಿಕೃತ ಗೊಳ್ಳಬೇಕಿದೆ. ಆದರೆ ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ರಾಜ್ಯಕ್ಕೆ ಭೇಟಿ ನೀಡುವುದು ಅಧಿಕೃತ ಗೊಳ್ಳಬೇಕಿದೆ. ಏಪ್ರಿಲ್ 1 ಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿಲಿದ್ದಾರೆ. ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ದೆಹಲಿಯಿಂದ ಕರೆ ಬರುವ ನಿರೀಕ್ಷೆಯಿದೆ ಎಂದು ಸಿಎಂ ಹೇಳಿದ್ದಾರೆ.