ಪ್ರಧಾನಿ ಮೋದಿ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯೇ ಆಗಿಲ್ಲ- ಸಚಿವ ಸುಧಾಕರ್ ಸ್ಪಷ್ಟನೆ…

Promotion

ಬೆಂಗಳೂರು,ಸೆಪ್ಟಂಬರ್,24,2020(www.justkannada.in): ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರೆದಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿ ಅವರ ಸಭೆಯಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.jk-logo-justkannada-logo

ಕೊರೋನಾ ನಿರ್ವಹಣೆ ಸಂಬಂಧ ನಿನ್ನೆ ಪ್ರಧಾನಿ ಮೋದಿ ರಾಜ್ಯಗಳ ಸಿಎಂಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ  ಸಭೆ ನಡೆಸಿ ಚರ್ಚಿಸಿದ್ದರು. ಈ ವೇಳೆ ರಾಜ್ಯದಿಂದ ಸಿಎಂ ಬಿಎಸ್ ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಭಾಗಿಯಾಗಿದ್ದರು.

ನಿನ್ನೆ ಮುಖ್ಯಮಂತ್ರಿಗಳ ಜೊತೆ ನಡೆದ ಮಹತ್ವದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣದ  ಮಾಹಿತಿ ಪಡೆದರು. ಈ ವೇಳೆ ಲಾಕ್ ಡೌನ್ ವಿಚಾರ ಚರ್ಚೆಯಾಗಿದೆಯಾ ಎಂಬ ಪ್ರಶ್ನೆ ಎದ್ಧಿತ್ತು.pm-modi-meeting-not-discussion-lockdown-minister-sudhakar-clarified

ಈ ಕುರಿತು ಸ್ಪಷ್ಟನೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ , ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ಎಂದು ಮಾಧ್ಯಮಗಳಿಗೆ  ಸ್ಪಷ್ಟನೆ ನೀಡಿದ್ದಾರೆ.

Key words: PM Modi- meeting -not – discussion – lockdown- Minister- Sudhakar -clarified.