ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ ನರೇಂದ್ರ ಮೋದಿ

kannada t-shirts

ನವದೆಹಲಿ:ಮೇ-26:(www.justkannada.in) ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದು ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಸಂಸದೀಯ ನಾಯಕರಾಗಿ ಆಯ್ಕೆಯಾದ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ಎನ್ ಡಿಎ ಸಂಸದರ ಸಭೆಯಲ್ಲಿ ನೂತನ ಎನ್ ಡಿಎ ಸಂಸದೀಯ ಮಂಡಳಿಯ ನಾಯಕರಾಗಿ ಆಯ್ಕೆಯಾಗಿದ ಮೋದಿ, ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿದ ಪ್ರಧಾನಿ ಮೋದಿ, ತಮಗಿರುವ ಬಹುಮತದ ಪತ್ರವನ್ನು ನೀಡಿ, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನರೇಂದ್ರ ಮೋದಿ ಅವರನ್ನು ಭಾರತದ ಪ್ರಧಾನಿಯಾಗಿ ನೇಮಕ ಮಾಡಿದ್ದು, ಅವರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನಾಂಕ ಹಾಗೂ ಕೇಂದ್ರ ಸಂಪುಟಕ್ಕೆ ಆಯ್ಕೆಯಾಗುವ ಸದಸ್ಯರ ಪಟ್ಟಿ ನೀಡುವಂತೆ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ಇದುವರೆಗೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಮೂಲಗಳ ಪ್ರಕಾರ ಮೇ 30ರಂದು ರಾಷ್ಟ್ರಪತಿ ಭವನದಲ್ಲಿ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ ನರೇಂದ್ರ ಮೋದಿ
PM Modi Meets President Ram Nath Kovind, Stakes Claim To Form Government

website developers in mysore