ಇಂದು ಪ್ರಧಾನಿ ಮೋದಿ ಮೈಸೂರಿಗೆ ಆಗಮನ ಹಿನ್ನೆಲೆ: ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧ.

Promotion

ಮೈಸೂರು,ಏಪ್ರಿಲ್,8,2023(www.justkannada.in):  ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದು ರಾತ್ರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ವಾಸ್ತವ್ಯ ಹೂಡಲಿದ್ದು ಈ ಹಿನ್ನೆಲೆಯಲ್ಲಿ  ನಂಜನಗೂಡು ಹೆದ್ದಾರಿಯಲ್ಲಿ  ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಗವಾಗಿದೆ.

ಇಂದು ಮಧ್ಯಾಹ್ನ 3 ರಿಂದಿ ರಾತ್ರಿ 10ರವರೆಗೆ ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ ಎನ್ನಲಾಗಿದೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗ ಬಳಸಲು ಸೂಚಿಸಿಲಾಗಿದೆ. ಕಡಕೋಳ-ದಡದಹಳ್ಳಿ ರಸ್ತೆಯಲ್ಲಿ ಸಂಚರಿಸಲು ಸೂಚನೆ ನೀಡಲಾಗಿದೆ.

Key words:  PM-Modi-Mysore- today-Traffic -restriction – Nanjangud highway.