ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ- ರಾಜ್ಯ ಕಾಂಗ್ರೆಸ್ ಟೀಕೆ.

kannada t-shirts

ಬೆಂಗಳೂರು,ಅಕ್ಟೋಬರ್,18,2021(www.justkannada.in): ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ ರೂ. 66, ಡೀಸೆಲ್ ರೂ. 55 ಕ್ಕೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ  ಮೋದಿ ಎಂದು ಬದಲಿಸಿಕೊಳ್ಳಲಿ.

ಹಾಗೆಯೇ ಬೆಲೆ ಏರಿಕೆಯ ಬಗ್ಗೆ ಮೌನ, ಚೀನಾ ಅತಿಕ್ರಮಣಕ್ಕೆ ಮೌನ , ರೈತರ ಹತ್ಯೆಗೆ ಮೌನ , ಅದಾನಿ ಡ್ರಗ್ಸ್ ದಂಧೆಯ ಬಗ್ಗೆ ಮೌನ , ನಿರುದ್ಯೋಗದ ಬಗ್ಗೆ ಮೌನ , ಪತ್ರಿಕಾಗೋಷ್ಠಿಗೆ ಮೌನ, ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ  ಮೋದಿ ಎಂದು ಬದಲಿಸಿಕೊಳ್ಳಲಿ ಎಂದು ಸಲಹೆ ನೀಡಿದೆ.

ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Key words: pm -Modi suffering – people-  State -Congress criticism.

website developers in mysore