ರಾಜ್ಯ ಪ್ರವಾಸಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ.

kannada t-shirts

ಬೆಂಗಳೂರು,ಜೂನ್,20,2022(www.justkannada.in ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿಳಿಯಲಿದ್ದು ಇವರನ್ನ ಸ್ವಾಗತಿಸಲು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಹಲವು ನಾಯಕರು ತೆರಳಿದ್ದಾರೆ.

ಈ ಮಧ್ಯೆ ರಾಜ್ಯ ಪ್ರವಾಸ ಕೈಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಸರಣಿ ಟ್ವೀಟ್ ಮಾಡಿದ್ದಾರೆ ‘ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ, ಬೆಂಗಳೂರು, ಮೈಸೂರು ಕಾರ್ಯಕ್ರಮದಲ್ಲಿ ಭಾಗವಹಿಸುವೆ’ ಐಐ ಎಸ್ ಸಿ ಬೆಂಗಳೂರು ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು.

ಇಂದು ಅಪರಾಹ್ನ, ನಾನು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್), ಬೆಂಗಳೂರು ಇಲ್ಲಿ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ. 150 ಟೆಕ್ ಹಬ್ ಗಳ ಲೋಕಾರ್ಪಣೆ ಕೂಡ ಮಾಡುವೆ . ಇವನ್ನು ಐಟಿಐಗಳನ್ನು ಉನ್ನತೀಕರಿಸಿ ಅಭಿವೃದ್ಧಿಗೊಳಿಸಲಾಗಿದೆ.

ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ ‘ಸುಗಮ ಜೀವನ’ಕ್ಕೆ ನೆರವಾಗಲಿದೆ.

ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ ಎಂದು ಪ್ರಧಾನಿ ಮೋದಿ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

Key words: PM Modi -tweeted – Kannada – state tour

 

website developers in mysore