ರಾಜ್ಯದ 17 ಜಿಲ್ಲೆಗಳ ಡಿಸಿಗಳ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್: ಸಭೆ ಬಳಿ ಮತ್ತಷ್ಟು ಕಠಿಣ ಕ್ರಮ- ಡಿಸಿಎಂ ಅಶ್ವಥ್ ನಾರಾಯಣ್…

Promotion

ಬೆಂಗಳೂರು,ಮೇ,18,2021(www.justkannada.in): ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು ಸಭೆ ಬಳಿಕ 17 ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.jk

ಈ ಬಗ್ಗೆ ಇಂದು ಮಾತನಾಡಿ ಮಾಹಿತಿ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್, ರಾಜ್ಯದ ಎಲ್ಲಾ ಡಿಸಿಗಳ ಬಳಿ ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ ಕುರಿತು ಮಾಹಿತಿ ಪಡೆದಿದ್ದೇವೆ. ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ಸಭೆ ಬಳಿಕ ಜಿಲ್ಲೆಗಳಲ್ಲಿ ಮತ್ತಷ್ಟು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.pm-modi-video-conference-17-districts-dcs-dcm-ashwath-narayan

ಲಾಕ್ ಡೌನ್ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಿದ್ಧಾರೆ ಎಂದು ಮಾಹಿತಿ ನೀಡಿದರು.

Key words: PM- Modi- Video Conference – 17 Districts -DCs -DCM -Ashwath Narayan.