ಫೆ.6 ರಂದು ಪ್ರಧಾನಿ ಮೋದಿ ತುಮಕೂರು ಭೇಟಿ ಹಿನ್ನೆಲೆ: ಮಾರ್ಗ ಬದಲಾವಣೆ ಮಾಡಿ ಆದೇಶ.

ತುಮಕೂರು,ಫೆಬ್ರವರಿ,2,2023(www.justkannada.in): ರಾಜ್ಯ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಫೆಬ್ರವರಿ 6 ರಂದು ತುಮಕೂರು ಜಿಲ್ಲೆಗೆ ಪ್ರಧಾನಿ ಮೋದಿ ಭೇಟಿ ನೀಡಿಲಿದ್ದು ಈ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.

ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಹೆಚ್​ಎಎಲ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಫೆಬ್ರವರಿ 6 ರಂದು ಬಾರಿ ಸರಕು ವಾಹನಗಳು, ಕೆಎಸ್​ಆರ್​ಟಿಸಿ ಬಸ್​ಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ತುಮಕೂರು ಡಿಸಿ ವೈಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್ ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸಬೇಕು ಎಂದು ಡಿಸಿ ವೈಎಸ್ ಪಾಟೀಲ್ ಆದೇಶಿಸಿದ್ದಾರೆ. ಹೆಚ್​ಎಎಲ್ ಮುಂಭಾಗ ಬಾರಿ ವಾಹನಗಳ‌ ನಿರ್ಭಂದಿಸಿ ಜಿಲ್ಲಾಡಳಿತ ಬದಲಿ ಮಾರ್ಗ ವ್ಯವಸ್ಥೆ ಕಲ್ಪಿಸಿದೆ.

ಫೆಬ್ರವರಿ 6 ರಂದು ಮಧ್ಯಾಹ್ನ 3.30 ಸುಮಾರಿಗೆ ಮೋದಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯಿರುವ ನೂತನ ಹೆಚ್ ಎಎಲ್ ಘಟಕಕ್ಕೆ ಆಗಮಿಸಿ ಹಲವು ಕಾರ್ಯಕ್ರಮಗಳ ಉದ್ವಾಟನೆ ನೇರವೇರಿಸಲಿದ್ದಾರೆ.

Key words: PM-Modi-visit – Tumkur – February 6-Change- route