ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತ.

Promotion

ಮೈಸೂರು,ಡಿಸೆಂಬರ್,27,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ತಾಲ್ಲೂಕು ಕಡಕೊಳ ಬಳಿ ಈ ಘಟನೆ ನಡೆದಿದೆ.  ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಪ್ರಹ್ಲಾದ್ ಮೋದಿ  ಅವರ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ  ಅವರ ಪುತ್ರ, ಸೊಸೆಗೆ ಗಂಭೀರ ಗಾಯಗಳಾಗಿದೆ. ಪ್ರಹ್ಲಾದ್ ಮೋದಿ ಅವರು ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.  ಮೈಸೂರು ಎಸ್ ಪಿ ಸೀಮಾ ಲಾಟ್ಕರ್ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Key words: PM Modi’s- brother- Prahlad Modi’s- car -accident – Mysore.