ಜ.2 ರಂದು ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ: ಅಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ….

Promotion

ತುಮಕೂರು,ಡಿ,31,2019(www.justkannada.in):  ಜನವರಿ 2 ರಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ ನಂತರ ಕಾರ್ಯಕ್ರಮದ ನಡೆಯುವ ಸ್ಥಳ ಭದ್ರತೆ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಜನವರಿ2 ರಂದು  2.15ಕ್ಕೆ ಪ್ರಧಾನಿ ಮೋದಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುವ ಅವರು ಬಳಿಕ ಶಿವಕುಮಾರ ಶ್ರೀಗಳ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ನೇರವಾಗಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿನ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಜೆ 5 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು 28 ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಗುತ್ತದೆ. ದೇಶದ 21 ರಾಜ್ಯಗಳಿಂದ ರೈತರು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.  ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಿಸಾನ್ ಸಮ್ಮಾನ್ ಯೋಜನೆ ಹಣ ಬಿಡುಗಡೆ ಮಾಡಲಾಗುತ್ತೆ ಎಂದು ಸಿಎಂ ಬಿಎಸ್  ಯಡಿಯೂರಪ್ಪ ತಿಳಿಸಿದರು.

Key words: PM narendra Modi-tumkur-CM BS Yeddyurappa – information- about – programs.