ಕೊರೋನಾ ವಿರುದ್ಧದ ಜನಾಂದೋಲನಕ್ಕೆ ಪ್ರಧಾನಿ ಮೋದಿ ಚಾಲನೆ….

ನವದೆಹಲಿ,ಅಕ್ಟೋಬರ್,8,2020(www.justkannada.in):  ದೇಶದಲ್ಲಿ ಆರ್ಭಟಿಸುತ್ತಿರುವ ಕೊರೋನಾ ಮಹಾಮಾರಿ ವಿರುದ್ಧ ಜನಾಂದೋಲನಕ್ಕೆ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.jk-logo-justkannada-logo

 ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕೋವಿಡ್-19 ವಿರುದ್ಧದ ಹೋರಾಟ ಜನಸ್ನೇಹಿಯಾಗಿದ್ದು ಕೊರೋನಾ ವಿರುದ್ಧ ಹೋರಾಡಲು ಎಲ್ಲರೂ ಜತೆಗೂಡಿ ಸಂಘಟಿತರಾಗೋಣ. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಿ, ಕೈ ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.  ಮುಂದಿನ ತಿಂಗಳು ಹಬ್ಬ ಹರಿದಿನಗಳು ಬರುತ್ತದೆ. ಚಳಿಗಾಲ ಬರುತ್ತದೆ. ಹೀಗಾಗಿ ಕೊರೋನಾ ಹರಡದಂತೆ ತಡೆಗಟ್ಟಲು ಕೈಜೋಡಿಸಿ ಎಂದು ಕರೆ ನೀಡಿದ್ದಾರೆ

ಭಾರತದಲ್ಲಿ ಕೋವಿಡ್-19 ವಿರುದ್ಧದ ಹೋರಾಟ ಜನಸ್ನೇಹಿಯಾಗಿದ್ದು ಕೋವಿಡ್ ವಾರಿಯರ್ ಗಳಿಂದ ಇದಕ್ಕೆ ಹೆಚ್ಚಿನ ಬಲ ಸಿಕ್ಕಿದೆ. ನಮ್ಮ ಸಾಮೂಹಿಕ ಪ್ರಯತ್ನದಿಂದ ಹಲವು ಜೀವಗಳನ್ನು ಉಳಿಸಲು ಸಾಧ್ಯವಾಗಿದೆ. ಈ ಪ್ರಯತ್ನವನ್ನು ನಾವು ಮುಂದುವರಿಸಿ ನಾಗರಿಕರನ್ನು ಭಯಾನಕ ವೈರಸ್ ನಿಂದ ಕಾಪಾಡಬೇಕಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ.pm-narendra-modi-tweet-campaign-against-corona

ಹೆಚ್ಚುತ್ತಿರುವ ಕೊರೋನಾ ಸೋಂಕಿನ ಮಧ್ಯೆ ಏನು ಮಾಡಬೇಕು, ಯಾವ ರೀತಿ ಜನರು ತಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದು ಎಚ್ಚರಿಕೆಯಿಂದಿರುವುದೇ ಜನಾಂದೋಲನ ಅಭಿಯಾನವಾಗಿದೆ. ಮುಂದಿನ ದಿನಗಳು ಹಬ್ಬಗಳ ಋತುಗಳಾಗಿದ್ದು ಅಲ್ಲದೆ ಚಳಿಗಾಲದ ಸಮಯ ಬರುತ್ತದೆ. ಹೀಗಾಗಿ ಕಡಿಮೆ ವೆಚ್ಚದಲ್ಲಿ ಪರಿಣಾಮಕಾರಿಯಾಗಿ ಅಭಿಯಾನ ಕೈಗೊಳ್ಳುವುದು ಮೋದಿಯವರ ಉದ್ದೇಶವಾಗಿದೆ.

Key words: PM  narendra Modi-tweet- Campaign-against -Corona