ಜ.2ಕ್ಕೆ ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ….

Promotion

ಡಿಸೆಂಬರ್ 31,2019(www.justkannada.in):  ಜನವರಿ 2ಕ್ಕೆ ಪ್ರಧಾನಿ ನರೇಂದ್ರ ಮೋದಿ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆ ಅಂದು ಸಾರ್ವಜನಿಕರ ಭೇಟಿಗೆ ಅವಕಾಶವಿರುವುದಿಲ್ಲ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗಾ ಶ್ರೀಗಳು ತಿಳಿಸಿದರು.

ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿದ್ಧಲಿಂಗಾ ಸ್ವಾಮೀಜಿಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 2ರಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿದ್ಯಾರ್ಥಿಗಳನ್ನುದ್ದೇಶಿಸಿ ಕೆಲ ನಿಮಿಷಗಳ ಕಾಲ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಹೇಳಿದರು.

ಇನ್ನು ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿಯಾಗಿಲ್ಲ. ಆದರೆ ಅಂದು ಸಿದ್ಧಗಂಗಾ ಮಠಕ್ಕೆ ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ಸಿದ್ಧಲಿಂಗ ಶ್ರೀಗಳು ತಿಳಿಸಿದ್ದಾರೆ.

Key words: PM narendra Modi- visit – Siddaganga Math -Jan 2- public –not allowed.