ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಪ್ರಕರಣ: 5ನೇ ಆರೋಪಿ ಪೊಲೀಸರಿಗೆ ಶರಣು.

Promotion

ಚಿತ್ರದುರ್ಗ,ಸೆಪ್ಟಂಬರ್,6,2022(www.justkannada.in):  ಮುರಾಘಾ ಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ , ಪೋಕ್ಸೋ ಕಾಯ್ದೆಯಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 5ನೇ ಆರೋಪಿ ವಕೀಲ ಗಂಗಾಧರಯ್ಯ ಪೊಲೀಸರ ಬಳಿ ಶರಣಾಗಿದ್ದಾರೆ.

ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ  ಪೊಲೀಸರಿಗೆ ಶರಣಾಗಿದ್ದು,  ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ.ganja peddlers arrested by mysore police

ಪ್ರಕರಣದ 3ನೇ ಆರೋಪಿಯಾಗಿರುವ ಮಠದ ಉತ್ತರಾಧಿಕಾರಿ ಮತ್ತು 4ನೇ ಆರೋಪಿ ಪರಮಶಿವಯ್ಯ ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ. ಹೀಗಾಗಿ ಅವರ ಬಂಧನಕ್ಕಾಗಿ ಹುಡುಕಾಟ ಮುಂದುವರಿದಿದೆ. ಇನ್ನು ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Key words: POCSO Act -case -against -Muruga Shri- 5th accused -surrenders – police.