ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್.

Promotion

ಚಿತ್ರದುರ್ಗ,ಸೆಪ್ಟಂಬರ್,23,2022(www.justkannada.in):  ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ತಿರಸ್ಕರಿಸಿದೆ.

ಸದ್ಯ ಮುರುಘಾಶ್ರೀಗಳು ಸೆಪ್ಟಂಬರ್ .27ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದು ಜಾಮೀನು ಕೋರಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಜಾಮೀನು ಅರ್ಜಿಯನ್ನ ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾ ಶರಣರನ್ನು ಡಿಸ್ಚಾರ್ಜ್​ ಮಾಡಲಾಗಿದೆ. ಸ್ವಾಮೀಜಿ ಅವರಿಗೆ ನಿನ್ನೆ  ಬೆಳಿಗ್ಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂಜಿಯೋಗ್ರಾಮ್ ಪರೀಕ್ಷೆ ಮಾಡಲಾಗಿತ್ತು. ಇಂದು ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಹೀಗಾಗಿ ಪೊಲೀಸ್​ ವಾಹನದಲ್ಲಿ ಶಿವಮೊಗ್ಗದಿಂದ ಚಿತ್ರದುರ್ಗ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.

Key words: POCSO- case-Court –rejects- Mr. Muruga shri- bail -application