ಬರಹಗಾರ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ.

ಚಿಕ್ಕಮಗಳೂರು,ಡಿಸೆಂಬರ್,14,2021(www.justkannada.in):  ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಬರಹಗಾರ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಪತಿ, ಬರಹಗಾರ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನ ತೋಟದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಅವರ ನೆಚ್ಚಿನ ಹವ್ಯಾಸಗಳ ಜೊತೆ ಕಾಫಿ ತೋಟವನ್ನು ಸಹ ನೋಡಿಕೊಂಡು ಹೋಗುತ್ತಿದ್ದರು. ಆದರೆ ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಬಂದಿದ್ದರು ಎನ್ನಲಾಗಿದೆ.

ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಮಗಳು ಸುಶ್ಮಿತಾ ನಿವಾಸಕ್ಕೆ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು ಸಂಜೆ 5.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅಂತ್ಯಕ್ರಿಯೆ ಮಾಡಲ್ಲ, ಆಸ್ಪತ್ರೆಗೆ ದೇಹದಾನ ಮಾಡಲಾಗುತ್ತದೆ.

ಕಾಡಿನ‌ಸಂತ, ಕನ್ನಡ ಸಾಹಿತ್ಯ ಲೋಕದ ಮೇರು ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿದ್ದ ರಾಜೇಶ್ವರಿ ಅವರು ಸಹ ಸಾಹಿತ್ಯ ಲೋಕದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದರು. ಅಲ್ಲದೇ ತನ್ನ ಪತಿಯ ಬಗ್ಗೆ ನನ್ನ ತೇಜಸ್ವಿ ಎಂಬ ಪುಸ್ತಕವನ್ನು ಸಹ ಬರೆದು ಪ್ರಖ್ಯಾತಿಗಳಿಸಿದ್ದರು.

ರಾಜೇಶ್ವರಿ ಅವರ ಬದುಕಿನ ಹಾದಿ

ರಾಜೇಶ್ವರಿ ತೇಜಸ್ವಿ- 1937 ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. ಹೆಣ್ಣುಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ಹಾಗೆ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದು, ಅಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಪರಿಚಯವಾಗಿ ಪ್ರೀತಿಸಿದರು.

ಆನಂತರ ಇವರ ಬದುಕಿನ ದಿಕ್ಕು ಬದಲಾಗಿತ್ತು. 1966ರಲ್ಲಿ ತೇಜಸ್ವಿ ಅವರನ್ನು ವಿವಾಹವಾಗಿ ರಾಷ್ಟ್ರಕವಿ ಮನೆಯ ಸೊಸೆಯಾಗಿ ಬಂದರು. ‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕವಾಗಿದೆ.

ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೆಯ ಪುಸ್ತಕವಾಗಿದೆ. ರಾಜೇಶ್ವರಿ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು,ಈ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Key words: writer -Poornachandra Tejasvi – wife- Rajeshwari Tejaswi – no more.

ENGLISH SUMMARY…

Rajeshwari Tejaswi no more
Chikkamagaluru, December 14, 2021 (www.justkannada.in): Rajeshwari Tejaswi (84), the wife of poet K.P. Poornachandra Tejaswi and daughter-in-law of national poet Kuvempu, died at a private hospital in Bengaluru today.
Rajeshwari Tejaswi was suffering from a high fever and was being treated at a private hospital in Bengaluru for the last four days. She was staying alone at the farmhouse located near the handpost in Moodigere, Chikkamagaluru District belonging to her late husband poet Poornachandra Tejaswi, after the latter’s demise. It is said that she had come to her daughter Sushmita’s house at HSR Layout in Bengaluru a few days ago.
The body was brought to Sushmita’s house where it will be kept for public darshan till 5.30 pm today. According to the family members, the body will be donated to the hospital.
Keywords: Rajeshwari Tejaswi/ Kuvempu’s daughter-in-law/ dies/ private hospital/