ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡೋದು ಖಚಿತ- ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಶಿವಮೊಗ್ಗ,ಫೆಬ್ರವರಿ,24,2022(www.justkannada.in):  ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಪೊಲೀಸ ಇಲಾಖೆ ನಿರ್ಲಕ್ಷ್ಯ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ ವರ್ಗಾವಣೆ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಇದೀಗ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅರಗ ಜ್ಞಾನೇಂದ್ರ, ಲಕ್ಷ್ಮಿ ಪ್ರಸಾದ್ ವರ್ಗಾವಣೆ ಇಲ್ಲ.  ಆದರೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡೋದು ಖಚಿತ ಎಂದು ಹೇಳಿದ್ದಾರೆ.

ಹರ್ಷನ ಮೊಬೈಲ್  ಫೋನ್ ಸಿಕ್ಕಿದೆ. ಕೊಲೆ ಸಂಬಂಧ 8 ಆರೋಪಿಗಳ ಬಂಧನವಾಗಿದೆ. ಕೊಲೆಗೆ ಸಹಕರಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಆರೋಪಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ.   ಆರೋಪಿಗಳ ಜತೆ ಪೊಲೀಸರು ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂದರು.

Key words: police department – Home Minister -Araga Jnanendra.