ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ರೌಡಿಶೀಟರ್​ ಗಳ ಮನೆ ಮೇಲೆ ಪೊಲೀಸರಿಂದ ದಾಳಿ:  ಮಾರಕಾಸ್ತ್ರಗಳು ವಶಕ್ಕೆ.

ಬೆಂಗಳೂರು,ಏಪ್ರಿಲ್,20,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ  ಆಲರ್ಟ್ ಆದ ಪೊಲೀಸರು 500ಕ್ಕೂ ಹೆಚ್ಚು ರೌಡಿಶೀಟರ್​ ಗಳ ಮನೆ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿಯಾಗಿದ್ದು,  ದಾಳಿ ವೇಳೆ ವಾರಂಟ್ ಪೆಂಡಿಂಗ್ ಇದ್ದ ಕೆಲ ರೌಡಿಗಳ ಮನೆಯಲ್ಲಿ ಮಚ್ಚು, ಲಾಂಗುಗಳು ಪತ್ತೆಯಾಗಿವೆ.

ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೂಚನೆ ಮೇರೆಗೆ ಎಲ್ಲಾ ವಿಭಾಗದ ಡಿಸಿಪಿಗಳ ನೇತ್ರತ್ವದಲ್ಲಿ ದಾಳಿ ನಡೆದಿದೆ. ಕೇಂದ್ರ ವಿಭಾಗ, ದಕ್ಷಿಣ ವಿಭಾಗ, ಪಶ್ಚಿಮ ವಿಭಾಗ ಮತ್ತು ಉತ್ತರ ವಿಭಾಗದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಿ ಮಾರಕಾಸ್ತ್ರ ಇಟ್ಟುಕೊಂಡಿದ್ದ ರೌಡಿಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ರೌಡಿಗಳಿಗೆ ಚುನಾವಣಾ ಸಮಯದಲ್ಲಿ ಯಾವ ಪಕ್ಷದ ಪರ ಹೋಗಿ ಗಲಾಟೆ, ರೌಡಿಸಂ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Key words: Police -raided – 500 rowdy sheeters – Bangalore