ಜೆಡಿಎಸ್ ಗೆ 100 ಸೀಟ್ ಬಂದರೆ ರಾಜಕೀಯ ನಿವೃತ್ತಿ- ಹೆಚ್.ಡಿಕೆಗೆ ಸಚಿವ ಸುಧಾಕರ್ ಸವಾಲು.

Promotion

ಚಿಕ್ಕಬಳ್ಳಾಪುರ,ಏಪ್ರಿಲ್,4,2023(www.justkannada.in): ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿಗೆ 120 ಅಲ್ಲ ನೂರು ಸೀಟ್ ಬರಲ್ಲ. ಬಿಜೆಪಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್ ಗೆ ನೂರು  ಸೀಟ್ ಬಂದರೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ  ಸುಧಾಕರ್,  ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ,ಜೆಡಿಎಸ್ ಅಧಿಕಾರಕ್ಕೆ ಬರಲ್ಲ. ಸ್ಪಷ್ಟಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ  ಬರುತ್ತದೆ. ಈ ಬಾರಿ ರಾಜ್ಯದಲ್ಲಿ ಅತಂತ್ರ ಸ್ಥಿತಿ ಬರಲ್ಲ. ಅತಂತ್ರ  ಸ್ಥಿತಿ  ಬರಲು ಜನರು ಅವಕಾಶ ನೀಡಲ್ಲ ಎಂದು ಹೇಳಿದರು.

Key words:  Political- retirement – JDS – 100 seats-  Minister- Sudhakar –challenges- HDK.