ನಮಗೆ ಸ್ನೇಹಕ್ಕಿಂತ ರಾಜಕೀಯವೇ ಮುಖ್ಯ : ಜನಾರ್ದನ ರೆಡ್ಡಿ ಪಕ್ಷ ಕುರಿತು ಸಚಿವ ಶ್ರೀರಾಮುಲು ಹೇಳಿಕೆ

Promotion

ಬಳ್ಳಾರಿ,ಫೆಬ್ರವರಿ,18,2023(www.justkannada.in): ನಮಗೆ ಸ್ನೆಹಕ್ಕಿಂತ ರಾಜಕೀಯವೇ ಮುಖ್ಯ.  ರಾಜಕೀಯದಲ್ಲಿ ಸ್ನೇಹವನ್ನು ಪರಿಗಣಿಸುವುದಿಲ್ಲ ಎಂದು ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿರುವ ಕುರಿತು ಮಾತನಾಡಿದ   ಸಚಿವ ಶ್ರೀರಾಮುಲು, ರಾಜಕೀಯ ಮತ್ತು ಸ್ನೇಹವನ್ನು ಒಂದೇ ತಕ್ಕಡಿಯಲ್ಲಿ ಇಟ್ಟುಕೊಳ್ಳುವುದಿಲ್ಲ. ರಾಜಕೀಯ ವಿಷಯದಲ್ಲಿ ನನ್ನದೇ ಆದ ಹೋರಾಟ ಇರುತ್ತದೆ. ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತೇವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ  ಹೆಚ್ಚು ಸ್ಥಾನಗಳನ್ನ ಬಿಜೆಪಿ ಗೆಲ್ಲುವುದು ಮುಖ್ಯ. ಹೀಗಾಗಿ.  ಈ ವಿಷಯದಲ್ಲಿ ರಾಜಕೀಯವೇ ಮುಖ್ಯ ಸ್ನೆಹವಲ್ಲ ಎಂದರು.

ಸೋಮಶೇಖರ ರೆಡ್ಡಿ ಅವರ ಸ್ಪರ್ಧೆ ಬಗ್ಗೆ ಅನುಮಾನ ಬೇಡ. ಬಳ್ಳಾರಿ ನಗರದಿಂದಲೇ ಸ್ಪರ್ಧೆ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಮಾಡಿದ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಬಳ್ಳಾರಿ ಗ್ರಾಮೀಣ ಮತ್ತು ಸಂಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಚಿಂತನೆ ನಡೆಸಿದ್ದೇನೆ. ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.

Key words: Politics – more- important- than- friendship-Minister-Sriramulu