ಹೆಚ್.ವಿಶ್ವನಾಥ್ ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ-  ಸಚಿವ ಎಸ್.ಟಿ ಸೋಮಶೇಖರ್ ವಿಶ್ವಾಸ…

ತುಮಕೂರು,ಜೂ,19,2020(www.justkannada.in): ವಿಧಾನಪರಿಷತ್ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರಿಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ನಾವೂ ಸಹ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇವೆ. ಅವರಿಗೆ ಮುಂದಿನ ದಿನಗಳಲ್ಲಿ ಸ್ಥಾನ ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ. ಅಲ್ಲದೆ, ಕೋರ್ ಕಮಿಟಿ ಪಟ್ಟಿಯಲ್ಲಿ ವಿಶ್ವನಾಥ್ ಹೆಸರನ್ನು ಸೇರಿಸಲಾಗಿದ್ದರೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಸಹಕಾರ ಸಚಿವ  ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ  ಭೇಟಿ ನೀಡಿ ಶ್ರೀ ಸಿದ್ಧಗಂಗಾ ಮಹಾಯೋಗಿಗಳ ಗದ್ದುಗೆಗೆ ತೆರಳಿ ಪೂಜೆ ನೆರವೇರಿಸಿದರು.

ಬಳಿಕ ಅಲ್ಲಿಂದ ಜ್ಞಾನ ಮಂದಿರಕ್ಕೆ ತೆರಳಿ ಮಹಾಯೋಗಿಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ಭೇಟಿ ಮಾಡಿದ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ  ಬಿ.ಸಿ.ಪಾಟೀಲ್ ಅವರು ಆಶೀರ್ವಾದ ಪಡೆದರು. ಇದೇ ವೇಳೆ ಶ್ರೀಗಳ ಯೋಗಕ್ಷೇಮ ವಿಚಾರಿಸಲಾಯಿತು.position-h-vishwanath-minister-st-somashekhar-tumakur-siddaganaga-math

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಈಗಾಗಲೇ ಮುಖ್ಯಮಂತ್ರಿಗಳು ಶೇ.90 ಬೇಡಿಕೆಗಳನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೂ ಸೂಕ್ತ ವ್ಯವಸ್ಥೆ ಆಗಲಿದೆ. ಇನ್ನು ಮುನಿರತ್ನ ಹಾಗೂ ಪ್ರತಾಪ್ ಗೌಡ ಪಾಟೀಲ್ ಅವರ ಕ್ಷೇತ್ರಗಳಿಗೆ ಚುನಾವಣೆಯಾಗಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅನುದಾನಕ್ಕೆ ಯಾರಿಂದಲೂ ಅಸಮಾಧಾನವಿಲ್ಲ….

ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿಯ ಯಾವೊಬ್ಬ ಶಾಸಕರೂ ಸಹ ಅಸಮಾಧಾನಗೊಂಡಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ. ಆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಬಳಿ ಹೇಳಿಕೊಂಡಿದ್ದಾರೆ. ಅಷ್ಟೇ ಬಿಟ್ಟರೆ ಯಾರಿಂದಲೂ ಅಸಮಾಧಾನ ಇಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಎಪಿಎಂಸಿ ವ್ಯವಸ್ಥೆಗೆ ಧಕ್ಕೆ ಇಲ್ಲ….

ಎಪಿಎಂಸಿ ಇರುವುದೇ ರೈತರಿಗೋಸ್ಕರ. ಕಾಯ್ದೆ ತಿದ್ದುಪಡಿಯಿಂದ ಯಾರಿಗೂ ತೊಂದರೆಯಾಗಿಲ್ಲ. ಇದರಿಂದ ಎಪಿಎಂಸಿ ವ್ಯವಸ್ಥೆಗೆ ಯಾವುದೇ ಧಕ್ಕೆಯಾಗದು.ಕಾಯ್ದೆ ತಿದ್ದಪಡಿಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ರೈತರು ಎಲ್ಲಿ ಬೇಕಿದ್ದರೂ ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದಾಗಿದೆ. ಮಲ್ಟಿನ್ಯಾಶನಲ್ ಕಂಪನಿಗಳು ಬರುವುದರಿಂದ ಯಾವುದೇ ಸಮಸ್ಯೆಯಾಗದು. ಅವರೇ ರೈತರ ಹೊಲಗಳಿಗೆ ಬಂದು ನೇರವಾಗಿ ಖರೀದಿಸಲಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: position – H.Vishwanath -Minister -ST Somashekhar –tumakur-siddaganaga math