ರಾಜ್ಯದಲ್ಲಿ ನೈಟ್ ಕರ್ಪ್ಯೂ ಮುಂದುವರಿಕೆ ಸಾಧ್ಯತೆ: ಬುಧವಾರ (ಜ.5) ಅಂತಿಮ ನಿರ್ಧಾರ

Promotion

ಬೆಂಗಳೂರು, ಜನವರಿ 02, 2021 (www.justkannada.in): ರಾಜ್ಯದಲ್ಲಿ ನೈಟ್ ಕರ್ಪ್ಯೂ ಮುಂದುವರೆಸುವ ಕುರಿತಂತೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಹತ್ವದ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಮುಂದುವರೆಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ರಂದೀಪ್ ತಿಳಿಸಿದ್ದಾರೆ.

ಮುಂದಿನ ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಪ್ಯೂ ಮುಂದುವರೆಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಸಭೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಜನ ಕೋವಿಡ್ ಕುರಿತು ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕೆಂದು ಆಯುಕ್ತರು ತಿಳಿಸಿದ್ದಾರೆ.