ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಂದೂಡಿಕೆ: ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ..? -ಮಾಜಿ ಸಿಎಂ ಸಿದ್ಧರಾಮಯ್ಯ…

ಬೆಂಗಳೂರು,ಮೇ,1,2021(www.justkannada.in):   ಲಸಿಕೆ ಪೂರೈಕೆಯಾಗದ ಹಿನ್ನೆಲೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕುವ ಕಾರ್ಯವನ್ನ ರಾಜ್ಯ ಸರ್ಕಾರ ಮುಂದೂಡಿಕೆ ಮಾಡಿದ್ದು ಈ ಕುರಿತು ಪ್ರಧಾನಿ ಮೋದಿ ಅವರನ್ನ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ  ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ಪ್ರಶ್ನಿಸಿದ್ದಾರೆ.

18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.postponement-vaccination-campaign-state-pm-modi-former-cm-siddaramaiah

ಲಸಿಕೆ ಪಡೆದುಕೊಳ್ಳಲು ಆನ್‌ ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ, ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

Key words: Postponement -vaccination campaign – state-PM Modi-Former cm-Siddaramaiah