ಕೆ.ಆರ್.ನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್, ಒಬ್ಬ ಸಾವು, ಇಬ್ಬರ ಸ್ಥಿತಿ ಗಂಭೀರ

Promotion

ಮೈಸೂರು, ಆಗಸ್ಟ್ 18, 2019 (www.justkannada.in): ತಂಬಾಕು ಕಟಾವು ವೇಳೆ ಮೂವರಿಗೆ ವಿದ್ಯುತ್ ಶಾಕ್ ಹೊಡೆದಿದೆ.

ಶಾಕ್‌ನಿಂದ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮೈಸೂರಿನ ಕೆ.ಆರ್.ನಗರದ ಹೊಸಕೊಟೆ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಇದರಿಂದಾಗಿ ಗ್ರಾಮದ ಮಹೇಶ್ (23) ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಇದೇ ಗ್ರಾಮದ ಕುಮಾರ ಮತ್ತು ಕುಮಾರ ಎಂಬುವವರಿಗೆ ಗಂಭೀರ ಗಾಯವಾಗಿದೆ. ಜಮೀನಿನಲ್ಲಿರುವ ಪಂಪ್‌ಸೆಂಟ್ ಸ್ವಿಚ್ ಬೋರ್ಡ್ ವಿದ್ಯುತ್ ಸ್ವೀಚ್‌ನಿಂದಾಗಿ ಈ ಅವಘಡ ಸಂಭವಿಸಿದೆ.

ಮಹೇಶ್ ಅವರ ರಕ್ಷಣೆಗೆ ತೆರಳಿದ ಇಬ್ಬರಿಗೆ ಗಾಯವಾಗಿದೆ. ಗಾಯಾಳುಗಳನ್ನು ಕೆ.ಆರ್.ನಗರ ತಾಲೂಕು ಆಸ್ವತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸೆಸ್ಕ್, ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.