ಕಾಲೇಜಿನಲ್ಲಿ ವಿದ್ಯುತ್ ಅವಘಡ….

ಮೈಸೂರು,ಮಾ,1,2021(www.justkannada.in):  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk

ಮೈಸೂರಿನ ಲಕ್ಷ್ಮೀಪುರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಅತಿಯಾದ ವಿದ್ಯುತ್ ಪ್ರವಹಿಸಿದ ಪರಿಣಾಮ ಮೀಟರ್ ಬೋರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಿದ್ಯುತ್ ಅವಘಡದಿಂದಾಗಿ ವಿದ್ಯುತ್ ವೈರಿಂಗ್ ಸುಟ್ಟು ಭಸ್ಮವಾಗಿದೆ.

power-short-circuit-mysore-college
ಕೃಪೆ-internet

ಸದ್ಯ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.  ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Power – Short circuit-mysore-college.