ಬೆಳಗಾವಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಿಎಸ್ವೈ ಜೊತೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ‘ಬ್ರೇಕ್ ಫಾಸ್ಟ್’ !

Promotion

ಬೆಳಗಾವಿ, ನವೆಂಬರ್, 24, 2019 (www.justkannada.in): ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇಂದು ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಈ ಮೂಲಕ ಬೆಳಗಾವಿ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಜೊತೆಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದಾರೆ. ಬ್ರೇಕ್ ಫಾಸ್ಟ್ ನೆಪದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಪ್ರಕಾಶ್ ಹುಕ್ಕೇರಿ ಟಿಕೆಟ್ ಕೈ ತಪ್ಪಿದ್ದರಿಂದ ಪ್ರಚಾರದಿಂದ ದೂರವೇ ಉಳಿದಿದ್ದಾರೆ. ಅವರು ಇಂದು ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.