ವಿಧಾನಸಭಾ ಚುನಾವಣೆಗೆ ಕಾರ್ಕಳದಿಂದ  ಸ್ಪರ್ಧಿಸುವುದಾಗಿ ಪ್ರಮೋದ್ ಮುತಾಲಿಕ್ ಘೋಷಣೆ.

Promotion

ಉಡುಪಿ,ಜನವರಿ,23,2023(www.justkannada.in):  ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧೆ ಮಾಡುವುದಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್  ಅವರು ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಮಾಹಿತಿ ನೀಡಿದ ಪ್ರಮೋದ್ ಮುತಾಲಿಕ್, 7 ರಿಂದ 8 ಬಾರಿ ಕ್ಷೇತ್ರದಲ್ಲಿ ಸುತ್ತಾಡಿದ್ದೇನೆ.  ನನಗೆ ಅಲ್ಲಿನ ಹಿಂದೂಗಳಿಗೆ ಆಗಿರುವ ಅನ್ಯಾಯ ಮತ್ತು ತಾಂಡವಾಡುತ್ತಿರುವ ಭ್ರಷ್ಟಾಚಾರ ಗಮನಕ್ಕೆ ಬಂದಿದೆ.  ಜನ ಸಹ ತಾನು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ಹಿಂದುತ್ವದ ಪರ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುತ್ತೇನೆ.  ನಾನು ಬಿಜೆಪಿ ಸಿದ್ಧಾಂತದ ವಿರೋಧಿ ಅಲ್ಲ.  ಕೆಲ ವ್ಯಕ್ತಿಗಳ ಸಿದ್ಧಾಂತದ ವಿರುದ್ಧ ನನ್ನ ಹೋರಾಟ.  ಹಿಂದುತ್ವದ ಮೇಲೆ ನಂಬಿಕೆ ಇದ್ದರೇ ಬಿಜೆಪಿಯವರು ನನಗೆ ಬೆಂಬಲಿಸಲಿ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.

Key words: Pramod Muthalik -announced – contest -assembly -elections -Karkala.