ಪ್ರಸಾರ ಭಾರತಿ ಹೊಸ ನಿಯಮ ಹಿಂಪಡೆಯಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಒತ್ತಾಯ…

ಬೆಂಗಳೂರು,ಏಪ್ರಿಲ್,17,2021(www.justkannada.in):  ಕೇವಲ ನಿರ್ವಹಣಾ ವೆಚ್ಚದ ಕಾರಣ ನೀಡಿ ಪ್ರಾದೇಶಿಕತೆಯ ಆಸ್ಮಿತೆಗೆ ಧಕ್ಕೆ ಉಂಟುಮಾಡುವ ಕ್ರಮ ಖಂಡನೀಯ.  ಹಾಗಾಗಿ ಪ್ರಸಾರ ಭಾರತಿ ಹೊಸ ನಿಯಮವನ್ನು ಹಿಂಪಡೆಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.jk

ಈ ಬಗ್ಗೆ ಮಾತನಾಡಿರುವ ಟಿ.ಎಸ್ ನಾಗಾಭರಣ, ಪ್ರಸಾರ ಭಾರತಿ ಜಾರಿಗೆ ತಂದಿರುವ ಹೊಸನೀತಿ, ನಿಯಮಗಳಿಂದಾಗಿ ಇದುವರೆವಿಗೂ ನಿರಂತರವಾಗಿ ಬಿತ್ತರವಾಗುತ್ತಿದ್ದ ಪ್ರಾದೇಶಿಕ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದು ಸರಿಯಾದ ಕ್ರಮವಲ್ಲ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ, ಜಿಲ್ಲಾ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಸ್ಥಳೀಯ ಉದ್ಯೋಗಿಗಳ ಬದುಕು ಡೋಲಾಯಮಾನವಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾದೇಶಿಕತೆಯ ಅಸ್ಮಿತೆಯನ್ನು ಪ್ರಶ್ನಿಸಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಆಕಾಶವಾಣಿ ನಿಲಯ ನಿರ್ದೇಶಕರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ, ದಕ್ಷಿಣದ ಕೇರಳ, ತಮಿಳುನಾಡು, ಆಂಧ್ರಪ್ರದೇಶಕ್ಕೆ ಇಲ್ಲದ ನಿಯಮಗಳನ್ನು ಕರ್ನಾಟಕದ ಮೇಲೆ ಹೇರಿ ಏಪ್ರಿಲ್ 13ರಿಂದ ಹೊಸ ನೀತಿಯನ್ನು ಜಾರಿ ಮಾಡಿರುವುದು ನಿಯಮಬಾಹಿರವಾಗಿದ್ದು, ಕೂಡಲೇ ಈ ನೀತಿಯನ್ನು ಪರಿಷ್ಕರಿಸಿ ಈ ಮೊದಲಿನಂತೆ ಆಕಾಶವಾಣಿಯಲ್ಲಿ ಹೆಚ್ಚಿನ ಸಮಯವನ್ನು ಕನ್ನಡದ ಕಾರ್ಯಕ್ರಮಗಳು ಪ್ರಸಾರವಾಗುವಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.Prasar Bharati- withdraw - new rule- Kannada Development Authority- TS Nagabharana

ಈಗಾಗಲೇ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಪ್ರಾಧಿಕಾರ ಗಮನಿಸಿದೆ. ಪ್ರಸಾರ ಭಾರತಿ ನಿಯಮಗಳನ್ನು ರೂಪಿಸಿಕೊಳ್ಳುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಆದರೆ ಪ್ರಾದೇಶಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ಕ್ರಮವಹಿಸುವುದು ಬಹಳ ಮುಖ್ಯವಾದ ಅಂಶವಾಗಿದೆ. ನಾಡುನುಡಿಯ ಬಗ್ಗೆ ಆಕಾಶವಾಣಿಯ ಕೊಡುಗೆ ಬಹುಮುಖ್ಯವಾಗಿದ್ದು, ಈ ನೀತಿಯನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

Key words: Prasar Bharati- withdraw – new rule- Kannada Development Authority- TS Nagabharana