ಜನವರಿ 23ರಿಂದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ.

Promotion

ಬೆಂಗಳೂರು,ಜನವರಿ,20,2023(www.justkannada.in):  ನಾಲ್ಕೈದು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವೆಯೇ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೂ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಇದೇ ಜನವರಿ 23ರಿಂದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ.

ಜನವರಿ 23, 24 ಮತ್ತು 25ರಂದು 3 ದಿನಗಳ ಕಾಲ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದ್ದು ಸಿಎಂ ಬಸವರಾಜ ಬೊಮ್ಮಾಯಿ 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.

ಬಜೆಟ್​ ಪೂರ್ವಭಾವಿ ಸಭೆಯು ನಿತ್ಯ ಬೆಳಗ್ಗೆ 10.30ರಿಂದ ಸಂಜೆ 6 ಗಂಟೆವರೆಗೂ ನಡೆಯಲಿವೆ. ಸಭೆಗೆ ನಿಗದಿತ ದಿನ ಹಾಗೂ ಸಮಯದಲ್ಲಿ ಆಯಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಅವಶ್ಯಕ ಮಾಹಿತಿಗಳು ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ಹಾಜರಾಗಲು ಆರ್ಥಿಕ ಇಲಾಖೆ ಸೂಚನೆ ನೀಡಿದೆ.

Key words: Pre-budget-meeting-CM Bommai – January 23.