ಕೊರೋನಾ ವೈರಸ್ ಹರಡದಂತೆ ರಾಜ್ಯ ಸರ್ಕಾರದಿಂದ ಮುನ್ನೆಚ್ಚರಿಕಾ ಕ್ರಮ-ಸಭೆ ಬಳಿಕ ಸಿಎಂ ಬಿಎಸ್ ವೈ ಹೇಳಿಕೆ..

Promotion

ಬೆಂಗಳೂರು,ಮಾ,10,2020(www.justkannada.in):  ಕೊರೋನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ರಾಜ್ಯದ ಜನತೆ ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈಗಾಗಲೇ ನಾಲ್ವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು ಈ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ಬಿಬಿಎಂಪಿ ಆಯುಕ್ತರು, ಅರೋಗ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್  ಯಡಿಯೂರಪ್ಪ, ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಒಂದೇ ಕುಟುಂಬದ ಮೂವರು ಮತ್ತು ಸಹದ್ಯೋಗಿಯಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕೊರೋನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿರುವಷ್ಟು ಮಾಸ್ಕ್ ಆರ್ಡರ್ ಮಾಡಿದ್ದೇವೆ. ಸುಳ್ಳು ವದಂತಿಗೆ ಗಮನ ನೀಡದೆ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ಜನತೆ ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

Keyw words: Precautionary action – state government- against -spread – coronavirus-CM BS Yeddyurappa