ವಿರೋಧದ ನಡುವೆ ಮೈಸೂರಿನಲ್ಲಿ ಮಹಿಷಾ ದಸರಾ ಆಚರಣೆಗೆ ಸಿದ್ಧತೆ…

Promotion

ಮೈಸೂರು,ಅಕ್ಟೋಬರ್,15,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಇನ್ನು ಕೇವಲ ಎರಡು ದಿನ ಬಾಕಿ ಇದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.jk-logo-justkannada-logo

ಈ ಮಧ್ಯೆ ವಿರೋಧದ ನಡುವೆ ಇಂದು ಮಹಿಷಾ ದಸರಾ ಆಚರಣ ಸಮಿತಿಯು, ಮಹಿಷಾ ದಸರಾ ಆಚರಣೆಗೆ ಮುಂದಾಗಿದ್ದು ಸಿದ್ಧತಾ ಕಾರ್ಯಗಳು ನಡೆಯುತ್ತಿದೆ. ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಲ್ಲಿ ಮಹಿಷಾ ದಸರಾ ಆಚರಣೆಗೆ ಮಹಿಷಾ ದಸರಾ ಆಚರಣಾ ಸಮಿತಿ ಸಿದ್ದತೆ ಮಾಡಿಕೊಳ್ಳುತ್ತಿದೆ.preparing-celebration-mahisha-dasara-mysore-opposition

ಇಂದು ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆಗೆ ಮತ್ತು ಮಹಿಷಾ ಪ್ರತಿಮೆಗೆ ಮಾಲಾರ್ಪಣೆಗೆ ಜಿಲ್ಲಾಡಳಿತ ಅನುಮತಿ ನೀಡದ ಹಿನ್ನಲೆ, ಕಳೆದ ವರ್ಷದಂತೆ ಈ ವರ್ಷವು ಅಂಬೇಡ್ಕರ್ ಪಾರ್ಕ್ ನಲ್ಲಿ ಮಹಿಷಾ ಪೋಟೋಗೆ ಪುಷ್ಪಾರ್ಚನೆ ಮೂಲಕ ಆಚರಣೆ ಮಾಡಲು ತೀರ್ಮಾನಿಸಿದ್ದು ಇದಕ್ಕಾಗಿ ಸಿದ್ಧತೆ ನಡೆಸಲಾಗುತ್ತಿದೆ. ಮಹಿಷಾ ದಸರಾ ಆಚರಣಾ ಸಮಿತಿಯ 20 ಜನರಿಗೆ ಆಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

Key words: Preparing – celebration – Mahisha Dasara – Mysore – opposition.