ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣ- ಸಚಿವ ಡಾ.ಕೆ.ಸುಧಾಕರ್  ಹೇಳಿಕೆ…

ಬೆಂಗಳೂರು, ಡಿಸೆಂಬರ್ 2,2020(www.justkannada.in):  ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.preparing-covid-vaccine-delivery-state-minister-dr-k-sudhakar

ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದರು.

ಪ್ರಪಂಚದಲ್ಲಿ ಶೇ.15 ರಿಂದ ಶೇ.20 ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿದೆ. ಲಸಿಕೆಯಿಂದ ಕೆಲ ಅಡ್ಡ ಪರಿಣಾಮಗಳು ಬರಬಹುದು. ಆದರೆ ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಸಂಶೋಧನೆಗೆ 900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಸಿಕೆ ಪ್ರಯೋಗ ನಡೆಯುತ್ತಿರುವ ಸಂಸ್ಥೆಗಳಿಗೆ ಖುದ್ದಾಗಿ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಚಿಕಿತ್ಸೆಗಾಗಿ 300 ಕೋಟಿ ರೂ. ಗೂ ಹೆಚ್ಚು ಹಣ ಬಿಡುಗಡೆ ಮಾಡಿ ಉಚಿತ ಚಿಕಿತ್ಸೆ ನೀಡಿದೆ. ದಿನಕ್ಕೆ 1.25 ಲಕ್ಷ ಪರೀಕ್ಷೆ ಮಾಡುತ್ತಿದ್ದು, ಈವರೆಗೆ 1.20 ಕೋಟಿ ಉಚಿತ ಪರೀಕ್ಷೆ ಮಾಡಲಾಗಿದೆ ಎಂದು  ಸಚಿವ ಡಾ.ಕೆ.ಸುಧಾಕರ್ ವಿವರಿಸಿದರು.preparing-covid-vaccine-delivery-state-minister-dr-k-sudhakar

ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ. 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಡಾಕೆ.ಸುಧಾಕರ್ ತಿಳಿಸಿದರು.

ಲಸಿಕೆ ದೊರೆತ ಬಳಿಕ ಹೆಚ್ಚು ಜನರಿಗೆ ನೀಡಲಾಗುವುದು. ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲಿಗೆ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು ಎಂದು  ಸಚಿವ ಸುಧಾಕರ್ ಮಾಹಿತಿ ನೀಡಿದರು.

English summary…

We are prepared to distribute COVID vaccine – Minister Dr. K. Sudhakar
Bengaluru, Dec. 2,2020 (www.justkannada.in): Health and Medical Education Minister Dr. K. Sudharkar today informed that the Government is all set to distribute the COVID vaccine.
Chief Minister B.S. Yedyurappa launched the 3rd phase of the clinical experiment of COVAXIN at the Vaidehi Institute of Medical Sciences and Research, in association with Bharath Biotech.preparing-covid-vaccine-delivery-state-minister-dr-k-sudhakar
Speaking to the media persons later, Minister Dr. K. Sudhakar explained that the experiment is being conducted in 25 places in 12 states, and the vaccine is being administered to 26,000 people. It is decided to administer the vaccine on an experimental basis to 1,600 to 1,800 people. He also informed the people not to listen to any rumours against the vaccine.
Keywords: COVAXIN/ Dr. K. Sudhakar/ CM B S Yedyurappa

Key words: Preparing – covid Vaccine -Delivery – State- minister –dr. K. sudhakar