ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಕೆಲವೇ ಕ್ಷಣಗಳಲ್ಲಿ ಮೈಸೂರು ದಸರಾ ಉದ್ಘಾಟನೆ.

Promotion

ಮೈಸೂರು,ಸೆಪ್ಟಂಬರ್ 26,2022(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಇಂದನಿಂದ ಶುರುವಾಗಲಿದ್ದು, ಮಹಾಮಾರಿ ಕೊರೊನಾದಿಂದಾಗಿ ಕಳೆಗುಂದಿದ್ದ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು   ಅವರು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದು ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ.   ತಾಯಿ ಚಾಮುಂಡೇಶ್ವರಿಗೆ ದ್ರೌಪದಿ ಮುರ್ಮು ಅವರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಇನ್ನು ಮೈಸೂರು ಅರಮನೆಯಲ್ಲಿ ಪರಂಪರಾಗತವಾಗಿ ರೂಢಿಗೆ ಬಂದಿರುವ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿದ್ದು ಇಂದು ರಾಜವಂಶಸ್ಥ ಯದುವೀರ್ ಖಾಸಗಿ ದರ್ಬಾರ್ ಹಾಲ್​ನಲ್ಲಿ ಬೆಳಿಗ್ಗೆ 11 ಗಂಟೆಗೆ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಚಾಮುಂಡಿ‌ ಬೆಟ್ಟದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆಯಿಂದ 11.30ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ಸಿಗುವುದಿಲ್ಲ.

Key words: President -Draupadi Murmu – Chamundi Hill- Inauguration -Dussehra