ಮೈಸೂರಿನಲ್ಲೇ ತಯಾರಾದ  ರೇಷ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಟ್ರಪತಿ ದ್ರೌಪದಿ ಮುರ್ಮು.

kannada t-shirts

ಮೈಸೂರು,ಸೆಪ್ಟಂಬರ್,26,2022(www.justkannada.in): ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ.

ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆ ಸೀರೆ ಇದು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಮೈಸೂರು ರೇಷ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು.

ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ. ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಿದ್ದರು. ಮೈಸೂರಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ನಿರ್ಮಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ.

ಮೈಸೂರು  ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು. ಹಾಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಷ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

Key words: President-Draupadi Murmu – special glow – mysore-dasara- silk saree

ENGLISH SUMMARY…

President Droupadi Murmu appears in Mysore silk saree: Wins hearts of Mysureans
Mysuru, September 26, 2022 (www.justkannada.in): President Droupadi Murmu became the first president to inaugurate the world-renowned Mysuru Dasara Mahotsav. She appeared in the inaugural ceremony in the traditional Mysore silk saree.
The Mysore silk saree is specially made for the first citizen of India. Mysuru District incharge and Cooperation Minister S.T. Somashekar had offered the silk saree, along with fruits as a tradition while inviting the President, on behalf of the District Administration.
Participation of the President wearing the same saree has made Mysureans more happy. After coming to know that the President Droupadi Murmu is fond of white sarees, the District Incharge Minister took special interest and asked the KSIC to prepare this saree. The KSIC was established by Sri Nalwadi Krishnaraja Wadiyar in 1912.
Mysore Silk is a world-famous brand and has earned a special place among the women.
Keywords: President/ Droupadi Murmu/ Mysore Dasara/ Mysore silk saree

website developers in mysore