ಇಂದು ಸಂಜೆ ಮೈಸೂರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್: ಮಧ್ಯಾಹ್ನ 2 ಗಂಟೆ ಬಳಿಕ ಸಾರ್ವಜನಿಕರಿಗೆ ಅರಮನೆ ಪ್ರವೇಶ ಬಂದ್….

ಮೈಸೂರು,ಅ,10,2019(www.justkannada.in): ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ಇಂದು ಸಂಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೈಸೂರಿಗೆ ಆಗಮಿಸಲಿದ್ದಾರೆ.

ಗುರುವಾರ ಸಂಜೆ 5.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಆಗಮಿಸಲಿದ್ದು,  ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಂಜೆ 7.15ಕ್ಕೆ ಅಂಬಾವಿಲಾಸ ಅರಮನೆಯಲ್ಲಿ ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿಯಾಗುವ ಹಿನ್ನೆಲೆ, ಇಂದು ಮಧ್ಯಾಹ್ನ 2ಗಂಟೆಯಿಂದ ಸಾರ್ವಜನಿಕರ ಅರಮನೆ ಪ್ರವೇಶ ರದ್ದು ಮಾಡಲಾಗಿದೆ.

ಭದ್ರತೆಯ ದೃಷ್ಟಿಯಿಂದ ಮಧ್ಯಾಹ್ನದ ಬಳಿಕ ಸಾರ್ವಜನಿಕರಿಗೆ ಅರಮನೆ ಪ್ರವೇಶಕ್ಕೆ ಅವಕಾಶವಿಲ್ಲ. ಕಾರ್ಯಕ್ರಮಕ್ಕೆ ಅರಮನೆ ವತಿಯಿಂದ ಆಹ್ವಾನ ಆಮಂತ್ರಣ ಇರುವವರಿಗೆ ಮಾತ್ರ ಅರಮನೆ ಪ್ರವೇಶಕ್ಕೆ ಅನುಮತಿ ಇದ್ದು . ಕಾರ್ಯಕ್ರಮಕ್ಕೆ 15ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ. ಕಾರ್ಯಕ್ರಮಕ್ಕೆ ಬರುವವರು ಹ್ಯಾಂಡ್ ಬ್ಯಾಗ್ ಹಾಗೂ ಮೊಬೈಲ್ ತರುವುದಕ್ಕೆ ನಿಷೇಧ ಹೇರಲಾಗಿದೆ.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು, ಜಯಚಾಮರಾಜ ಒಡೆಯರ್ ಅವರ ಶ್ರೀವಿದ್ಯಸಂಕೀರ್ತನ ಸುಧಾಲಹರಿ ‌ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಬಳಿಕ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಅಕ್ಟೋಬರ್ 11 ರಂದು ಬೆಳಿಗ್ಗೆ 8.30ಕ್ಕೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ  ಶ್ರೀಕಂಠೇಶ್ವರ ದೇವಾಲಯಕ್ಕೆ ಬೆಳಗ್ಗೆ 8.30 ರಿಂದ 10.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ವಿಧಿಸಲಾಗಿದೆ ಇದಾದ ನಂತರ ರಾಷ್ಟ್ರಪತಿ ರಮನಾಥ್ ಕೋವಿಂದ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಬೆಳಗ್ಗೆ 9.45ರಿಂದ 11.45ರವರೆಗೆ ಸಾರ್ವಜನಿಕರಿಗೆ ದೇವಾಲಯ ಪ್ರವೇಶ ನಿಷೇಧಿಸಲಾಗಿದೆ.

ನಂತರ ಸಂಜೆ 4 ಗಂಟೆಗೆ ವರುಣಾಗ್ರಾಮದಲ್ಲಿ ಜೆಎಸ್ ಎಸ್ ಸಂಸ್ಥೆಯ ಹೊಸ ಕ್ಯಾಂಪಸ್ ಗೆ ಶಂಕು ಸ್ಥಾಪನೆ ನೆರವೇರಿಸಲಿರುವ ರಾಷ್ಟ್ರಪತಿ ರಮನಾಥ್ ಕೋವಿಂದ್ ಸಂಜೆ 5.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಿರ್ಗಮಿಸಲಿದ್ದಾರೆ.

Key words: president- ramanath kovind- visit- mysore-palace-chamundi hills- public