ಹಾಲಿನ ದರ 3 ರೂ. ಏರಿಕೆಗೆ ಕೆಎಂಎಫ್ ನಿರ್ಧಾರ.

ಬೆಂಗಳೂರು,ಸೆಪ್ಟಂಬರ್,13,2022(www.justkannada.in): ಎರಡು ದಿನಗಳ ಹಿಂದಷ್ಟೆ ತುಪ್ಪದ ಬೆಲೆ ಏರಿಕೆ ಮಾಡಿರುವ  ಕೆಎಂಎಫ್ ಇದೀಗ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.

ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ.  ಪ್ರತಿ ಲೀಟರ್ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಈ ಮೂಲಕ  ರಾಜ್ಯದ ಜನರಿಗೆ ಮತ್ತೆ ಹಾಲಿನ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ . ಆದರೆ ಕೆಎಂಎಫ್ ನ ಈ ನಿರ್ಧಾರಕ್ಕೆ ರಾಜ್ಯ ಸರ್ಕಾರದ ಅನುಮತಿ ಅಗತ್ಯವಿದೆ.  ಸರ್ಕಾರ ಏನಾದರೂ ಒಪ್ಪಿಗೆ ಸೂಚಿಸಿದರೇ ಹಾಲಿನ ದರ ಏರಿಕೆಯಾಗಲಿದೆ.

14 ಜಿಲ್ಲಾ ಒಕ್ಕೂಟಗಳು ಸಹ ನಂದಿನಿ ಹಾಲಿನ ಬೆಲೆ ಹೆಚ್ಚಿಸಲು ಒತ್ತಡ ಹೇರುತ್ತಿವೆ ಎಂದು ಹೇಳಲಾಗಿದೆ. ಈಗಾಗಲೇ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಹಾಲಿನ ಬೆಲೆ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ.

Keywords: price -milk – KMF- decision – increase.