ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ಚರ್ಚೆ: ಸಚಿವರ ಆಕ್ಷೇಪಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಗರಂ…

kannada t-shirts

ಬೆಂಗಳೂರು,ಮಾರ್ಚ್,9,2021(www.justkannada.in):  ದೇಶದಲ್ಲಿ ಬೆಲೆ ಏರಿಕೆಯಾಗುತ್ತಿರುವ ವಿಚಾರ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆದರು.jk

ವಿಧಾನಸಭಾ ಕಲಾಪದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಬೆಲೆ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದರು. ದೇಶದಲ್ಲಿ ಅಚ್ಚೇದಿನ್ ಬರುತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅಚ್ಚೇ ದಿನ್ ಬರಲೇ ಇಲ್ಲ. ಬೆಲೆ ಏರಿಕೆಯಿಂದ ಬಡವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡವರು ಈಗ ದಿನ ದೂಡುವುದು ಕಷ್ಟವಾಗಿದೆ. ಸಾಮಾನ್ಯ ಜನರು ಗೋಳಾಡುತ್ತಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಅಲ್ಲದೆ ಕೊರೋನಾದಿಂದ ಜನ ಸಮಕಷ್ಟಕ್ಕೆ ಸಿಲುಕಿದ್ದಾರೆ. ಕೊರೋನಾ ಸಂಕಷ್ಟದ ನಡುವೆ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

price-rise-discussion-assembly-opposition-leader-siddaramaiah
ಕೃಪೆ- internet

ಈ ವೇಳೆ ಮಧ್ಯಪ್ರವೇಶಿಸಿ ಬೆಲೆ ಏರಿಕೆ ಚರ್ಚೆಗೆ ಆಕ್ಷೇಪ ವ್ಯಕ್ತಪಡಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಜೆಟ್ ಮೇಲೆ ಚರ್ಚೆ ಮಾಡಿ ಮನವಿ ಮಾಡಿದರು. ಇದೇ ವೇಳೆ ಸಮಯ ವ್ಯರ್ಥವಾಗುತ್ತದೆ ಎಂದು ಸಚಿವರು ಹೇಳುತ್ತಿದ್ದಾರೆ ಎಂದು ಸ್ಪೀಕರ್ ಹೇಳಿದರು.

ಸಚಿವ ಬಸವರಾಜ ಬೊಮ್ಮಾಯಿ ಮತ್ತು ಸ್ಪೀಕರ್ ವಿರುದ್ಧ ಗರಂ ಆದ ಸಿದ್ಧರಾಮಯ್ಯ, ಜನ ಸಾಮಾನ್ಯರ ಸಮಸ್ಯೆಗಳ ಬಗ್ಗೆ ಚರ್ಚಿಸೋದು ಬೇಡವೆ…? ಇದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನವಾಗಿದೆ ಎಂದು ಗುಡುಗಿದರು.

Key words: price rise –discussion-Assembly-Opposition leader -Siddaramaiah

 

website developers in mysore