ರಾಷ್ಟ್ರ ರಾಜಧಾನಿಯಲ್ಲಿ ಕನ್ನಡಿಗರ ಕಲರವ: ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ.

Promotion

ನವದೆಹಲಿ,ಫೆಬ್ರವರಿ,25,2023(www.justkannada.in): ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ನವದೆಹಲಿಯ ತಾಲ್ಕಟೋರಾ ಸ್ಟೇಡಿಯಂನಲ್ಲಿ ಆಯೋಜಿಸಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭವನ್ನ ನಗಾರಿ ಬಾರಿಸುವ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ಮೂಲಕ ಕನ್ನಡಿಗರ ಹಬ್ಬಕ್ಕೆ ಪ್ರಧಾನಿ ಮೋದಿ ಸಾಕ್ಷಿಯಾದರು.

ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಚಿವ ಸುನೀಲ್ ಕುಮಾರ್ , ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರಿಗಳು,  ನಂಜಾವಧೂತ ಶ್ರೀಗಳು,  ಪೇಜಾವರ ಮಠ ಶ್ರೀಗಳು, ಮೈಸೂರು ರಾಜವಂಶಸ್ಥ ಯದುವೀರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗಡೆ ಪಾಲ್ಗೊಂಡಿದ್ದರು. 3 ಸಾವಿರಕ್ಕೂ ಅಧಿಕ ಹೊರ ಕನ್ನಡಿಗರು ಭಾಗಿಯಾಗಿದ್ದಾರೆ.

Key words: Prime Minister Modi – Delhi -Karnataka –Sangh-Amrita Mahotsav.