ವಿಜ್ಞಾನ ಕ್ಷೇತ್ರದಲ್ಲಿ ವಿಶ್ವದ ಅಗ್ರ 10 ದೇಶಗಳಲ್ಲಿ ಭಾರತಕ್ಕೂ ಸ್ಥಾನ- ಪ್ರಧಾನಿ ಮೋದಿ.

ನವದೆಹಲಿ,ಜನವರಿ,3,2022(www.justkannada.in): ವಿಜ್ಞಾನ ಕ್ಷೇತ್ರದಲ್ಲಿ ಭಾರತವು ವಿಶ್ವದ ಅಗ್ರ 10 ದೇಶಗಳಲ್ಲಿ ತನ್ನ ಸ್ಥಾನವನ್ನು ಕಂಡುಕೊಂಡಿದೆ . ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ  ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

108ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಎಲ್ಲಾ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಬಳಕೆಯಾಗುತ್ತಿದೆ ತಂತ್ರಜ್ಞಾನ ನೆರವಿನಿಂದ ಸಾಕಷ್ಟು ಅನುಕೂಲವಾಗುತ್ತಿದೆ.  2015ರವರೆಗೆ 130 ದೇಶಗಳಲ್ಲಿ ಭಾರತವು ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ 81ನೇ ಸ್ಥಾನದಲ್ಲಿತ್ತು. 2022ರಲ್ಲಿ ನಾವು 40ನೇ ಸ್ಥಾನಕ್ಕೆ ಏರಿದ್ದೇವೆ. ಪಿಎಚ್‌ ಡಿ ಮತ್ತು ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಭಾರತವು ಅಗ್ರ 3 ದೇಶಗಳಲ್ಲಿ ಒಂದಾಗಿದೆ ಎಂದರು.

ಭಾರತದಲ್ಲಿ 21ನೇ ಶತಮಾನದಲ್ಲಿ ಡೇಟಾ ಮತ್ತು ತಂತ್ರಜ್ಞಾನ ಭಾರತದ ವಿಜ್ಞಾನವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲವು. ಡೇಟಾ ವಿಶ್ಲೇಷಣೆಯು ವೇಗವಾಗಿ ಮುಂದುವರಿಯುತ್ತಿದೆ. ಈ ಮಾಹಿತಿಯನ್ನು ಒಳನೋಟಕ್ಕೆ ಮತ್ತು ವಿಶ್ಲೇಷಣೆಯನ್ನು ಕ್ರಿಯಾಶೀಲ ಜ್ಞಾನವಾಗಿ ಪರಿವರ್ತಿಸಲು ಇದು ಸಹಾಯ ಮಾಡುತ್ತದೆ ಎಂದು  ಪ್ರಧಾನಿ ಮೋದಿ ತಿಳಿಸಿದರು.

Key words: Prime Minister -Modi -places -India – top 10 countries – world – science.