ಸರ್.ಎಂ ವಿಶ್ವೇಶ್ವರಯ್ಯ ಸ್ಮಾರಕ , ಮ್ಯೂಜಿಯಂಗೆ ಪ್ರಧಾನಿ ಮೋದಿ ಭೇಟಿ.

Promotion

ಚಿಕ್ಕಬಳ್ಳಾಪುರ,ಮಾರ್ಚ್,25,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಹ ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದಾರೆ.

ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮಾರಕ ಮತ್ತು ಮ್ಯೂಜಿಯಂಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದು ಸರ್.ಎಂ.ವಿಶ್ವೇಶ್ವರಯ್ಯ ಪುತ್ಹಳಿಗೆ ಪುಷ್ಮನಮನ ಸಲ್ಲಿಸಿದರು.

ನಂತರ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸುಧಾಕರ್ ಉಪಸ್ಥಿತರಿದ್ದಾರೆ.

Key words: Prime Minister- Modi -visits -Sir M Vishweshwaraiah- Memorial Museum.