ರಾಜ್ಯ ಖಾಸಗಿ ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ-ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು,ಜನವರಿ,29,2021(www.justkannada.in) : ಶಾಲಾ ಫೀಸ್ ಕಡಿತಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಖಾಸಗಿ ಶಾಲೆಗಳು 2019ರಲ್ಲಿ ಪಡೆದ ಬೋಧನಾ ಶುಲ್ಕದ ಶೇ.70ರಷ್ಟು ಮಾತ್ರ ಪಡೆಯಬೇಕು. ಬೋಧನಾ ಶುಲ್ಕ ಹೊರತುಪಡಿಸಿ ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

jk

 

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, 2019ರ ಬೋಧನಾ ಶುಲ್ಕದ ಶೇ.70ರಷ್ಟು ಶುಲ್ಕ ಪಡೆಯಬೇಕು. 2020-21ನೇ ಶೈಕ್ಷಣಿಕ ಸಾಲಿನಲ್ಲಿ ಶೇ.70 ಕ್ಕಿಂತ ಹೆಚ್ಚಿನ ಶುಲ್ಕ ಪಡೆದಿದ್ದಲ್ಲಿ 2021-22ನೇ ಸಾಲಿನಲ್ಲಿ ಪಾವತಿಸಬೇಕಾದ ಶುಲ್ಕಕ್ಕೆ ಹೊಂದಾಣಿಕೆಯನ್ನು ಮಾಡಿಕೊಳ್ಳಬಹುದು. ಯಾವುದೇ ಶಿಕ್ಷಣ ಸಂಸ್ಥೆ ಶೇ.70 ಕ್ಕಿಂತ ಕಡಿಮೆ ಶುಲ್ಕವನ್ನು ವಿಧಿಸಲು ಇಚ್ಛಿಸಿದಲ್ಲಿ, ಸಂಪೂರ್ಣ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ ಎಂದು ಹೇಳಿದರು.

ನಾನು ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದಿಲ್ಲ. ಒಂದು ವರ್ಷದ ಹಿಂದೆ ಇದ್ದ ಆರ್ಥಿಕ ಪರಿಸ್ಥಿತಿ ಈಗ ಇಲ್ಲ. ಸಮಾಜದ ಎಲ್ಲರೂ ಸಂಕಷ್ಟದಲ್ಲಿದ್ದಾರೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಕೋವಿಡ್ ನಿಂದಾಗಿ ಎಲ್ಲರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಶಾಲೆಯಲ್ಲಿ ಶಿಕ್ಷಕರಿಗೆ ವೇತನ ನೀಡಲಾಗುತ್ತಿಲ್ಲ. ಪೋಷಕರು ಶುಲ್ಕ ಪಾವತಿಸಲಾಗದ ಸ್ಥಿತಿಯಲ್ಲಿದ್ದಾರೆ. ಪೋಷಕರು ಶಾಲೆ ನಡೆದಿಲ್ಲ ಅಂತಾರೆ,. ಶಾಲೆಗಳು ಶಿಕ್ಷಕರಿಗೆ ಹೇಗೆ ಸಂಬಳ ಕೊಡಲಿ ಅಂತಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.Private-Education-organizations-lobby-Doesn't die-Minister-S.Suresh Kumarಶಾಲೆಗೆ ದಾಖಲಾಗುವ ಒಂದು ಕಂತಿನ ಶುಲ್ಕ ಪಾವತಿಸಲಾಗಿದೆ. ಎರಡನೇ ಕಂತಿನ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈ ವರ್ಷ ಯಾವ ಶಾಲೆಯು ಶುಲ್ಕ ಹೆಚ್ಚಳ ಮಾಡಬಾರದು ಎಂದು ಹೇಳಿದ್ದಾರೆ.

key words : Private-Education-organizations-lobby-Doesn’t die-Minister-S.Suresh Kumar