1 ರಿಂದ 8ನೇ ತರಗತಿ ಆರಂಭಕ್ಕೆ ಖಾಸಗಿ ಶಾಲಾ ಒಕ್ಕೂಟ ಒತ್ತಾಯ.

ಬೆಂಗಳೂರು,ಆಗಸ್ಟ್,30,2021(www.justkannada.in):  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ನಡುವೆ ಈಗಾಗಲೇ 9,10 ಮತ್ತು ಪಿಯುಸಿ ತರಗತಿಗಳನ್ನ ಆರಂಭಿಸಲಾಗಿದ್ದು , ಪ್ರಾಥಮಿಕ ತರಗತಿಗಳ ಆರಂಭಕ್ಕೆ ಇಂದು ಮುಹೂರ್ತ ಫಿಕ್ಸ್ ಆಗಲಿದೆ.

ಈ ಮಧ್ಯೆ  1 ರಿಂದ 8 ನೇ ತರಗತಿ ಶಾಲೆಗಳನ್ನ ಆರಂಭಿಸಬೇಕು ಎಂದು ಖಾಸಗಿ ಶಾಲಾ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ಈ ಕುರಿತು ಇಂದು ಮಾತನಾಡಿದ ರುಪ್ಸಾ ಕರ್ನಾಟಕ ಅಧ್ಯಕ್ಷ ಹಾಲನೂರು ಲೇಪಾಕ್ಷಿ, ರಾಜ್ಯದಲ್ಲಿ 1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭ ಮಾಡಬೇಕು. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ 1-8 ನೇ ತರಗತಿ ಆರಂಭಿಸುವಂತೆ  ತೀರ್ಮಾನ ಕೈಗೊಳ್ಳಬೇಕು. ಸಿಎಂ ಕೊಟ್ಟ ಮಾತನ್ನ ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದರು.

ಇನ್ನು ಇಂದು  ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವರು ಅಧಿಕಾರಿಗಳ ಸಭೆ ನಡೆಯಲಿದ್ದು ಸಭೆಯಲ್ಲಿ ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಶಾಲೆ ಆರಂಭದ ಕುರಿತಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: Private school- union- demands- 1st to 8th -start