ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಡಿಸೆಂಬರ್,20,2020((www.justkannada.in) : ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ ಎಂದು ಟ್ವಿಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

 private-schools-above-government-No control-Former CM-Siddaramaiah

ತರಗತಿಗಳು ನಡೆಯದೆ ಇದ್ದರೂ ಬೋದನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳುಬೆದರಿಕೆಗೆ ಜಗ್ಗುತ್ತಿಲ್ಲ. ಸರ್ಕಾರ ಖಾಸಗಿ ಶಾಲೆಗಳ ಜೊತೆ ಷಾಮೀಲಾಗಿದೆ ಎಂದು ದೂರಿದರು. private-schools-above-government-No control-Former CM-Siddaramaiah

siddaramaih#profile..ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

key words : private-schools-above-government-No control-Former CM-Siddaramaiah