‘ನಾ ನಾಯಕಿ’ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ: ‘ಗೃಹಲಕ್ಷ್ಮಿ ಯೋಜನೆ’ ಘೋಷಿಸಿದ ಡಿಕೆಶಿ.

ಬೆಂಗಳೂರು,ಜನವರಿ,16,2023(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್  ಅಧಿಕಾರಕ್ಕೆ ಬಂದರೆ ಮಹಿಳೆಯರಿಗಾಗಿ ಗೃಹಲಕ್ಷ್ಮಿ ಯೋಜನೆ  ಜಾರಿ ಮಾಡುತ್ತೇವೆ. ರಾಜ್ಯದ ಮಹಿಳೆಯರಿಗೆ 2,000 ರೂ.ನೀಡುತ್ತೇವೆ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ನಡೆದ ‘ನಾ ನಾಯಕಿ’ ಸಮಾವೇಶದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸಮ್ಮುಖದಲ್ಲಿ ಅವರು ಈ ಘೋಷಣೆ ಮಾಡಿದರು. ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವ ಬಗ್ಗೆಯೂ ಅವರು ಭರವಸೆ ನೀಡಿದರು.

ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆ ನೀಡುತ್ತಿದ್ದೇವೆ. ಯೋಜನೆಯ ಭರವಸೆಯೊಂದಿಗೆ ಗ್ಯಾರಂಟೀ ಚೆಕ್ ಅನ್ನು ಈಗಲೇ ನೀಡುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ- ಪ್ರಿಯಾಂಕ ಗಾಂಧಿ ವಾಗ್ದಾಳಿ.

ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕೇಳಿ ಬಂದಿದೆ.  ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ಕೇಳಿ ಬಂದಿದೆ. ಕೋವಿಡ್ ವೇಳೆ ಜನರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಉದ್ಯೋಗ  ನೀಡುವಲ್ಲಿ ವಿಫಲವಾಗಿದೆ. ಬೆಲೆ ಏರಿಕೆಯಿದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ  ರೈತರು ಬಡವರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ  ಅನಗತ್ಯ ವಿವಾದ ಸೃಷ್ಠಸಿ ಜನರನ್ನ ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಕಿಡಿಕಾರಿದರು.

ದೇಶಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೊಡುಗೆ ಸಾಕಷ್ಟಿದೆ. ಅವರು ಬಡವರು, ಮಹಿಳೆಯರು, ರೈತರಿಗೆ ಸಾಕಷ್ಟು ಯೋಜನೆಗಳು ನೀಡಿದ್ದರು. ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಾಕಷ್ಟು ಜನಪರ ಕೆಲಸಗಳನ್ನು ಮಾಡಲಾಗಿತ್ತು. ಆದರೆ, ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನಸಾಮಾನ್ಯರ ಹಿತ ಕಡೆಗಣಿಸಿದೆ ಎಂದು ಪ್ರಿಯಾಂಕಾ ಹೇಳಿದರು.

Key words: Priyanka Gandhi – BJP -Grilahakshmi Yojana-  Announced – DK shivakumar