ಪಾಕ್ ಪರ ಯುವತಿ ಅಮೂಲ್ಯ ಘೋಷಣೆ ಕೇಸ್: ಕಠಿಣ ಕ್ರಮಕ್ಕೆ ಮಾಜಿ ಸಿಎಂ  ಹೆಚ್.ಡಿ ಕುಮಾರಸ್ವಾಮಿ ಆಗ್ರಹ…

Promotion

ರಾಮನಗರ,ಫೆ,21,2020(www.justkannada.in):  ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಈ ಕುರಿತು ಇಂದು ರಾಮನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಯುವತಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ್ದು ಖಂಡನೀಯ. ಯಾರೇ ಆದರೂ ಇದನ್ನ ಖಂಡಿಸಬೇಕು. ಕಾರ್ಯಕ್ರಮ ಆಯೋಜಕರು ಎಚ್ಚರಿಕೆಯಿಂದಿರಬೇಕು. ಹೀಗೆ ಮಾತನಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ ಇಲ್ಲ ಪ್ರಚಾರಕ್ಕಾಗಿ ಮಾಡಿದ್ದಾಳೋ, ಆಕೆಗೆ ಈ ಬಗ್ಗೆ ತಿಳಿವಳಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಇಂತಹ ದೇಶ ದ್ರೋಹದ ಕೆಲಸ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಹೆಚ್.ಡಿಕೆ ಒತ್ತಾಯಿಸಿದರು.

Key words:  pro-Pakistan- young woman-case- Demand-Action- Former CM HD Kumaraswamy